ಕಾಸರಗೋಡು: ಕೇಂದ್ರಾವಿಷೃತ ಯೋಜನೆಗಳ ಸುಗಮ ಹಾಗೂ ಶೀಘ್ರ ಅನುಷ್ಠಾನಕ್ಕಾಗಿ ನೌಕರರು ಸಮರ್ಥವಾಗಿ ಕೆಲಸ ನಿರ್ವಹಿಸಬೇಕು ಎಂದು ಸಂಸದ ರಾಜಮೋಹನ್ ಉಣ್ಣಿತ್ತಾನ್ ತಿಳಿಸಿದ್ದಾರೆ. ಅವರು ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಲಾದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಯೋಜಿಸಲಾದ ಕೇಂದ್ರಾವಿಷ್ಕøತ 20 ಯೋಜನೆಗಳ ಪರಿಶೀಲನೆ ನಡೆಸಲಾಯಿತು. ಈ ಯೋಜನೆಗಳ ಅನುಷ್ಠಾನದಲ್ಲಿ ಅನುಷ್ಠಾನಾಧಿಕಾರಿಗಳು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವುದರ ಜತೆಗೆ ಯೋಜನೆಗಳನ್ನು ಶೀಘ್ರ ಪೂರ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು. ಆರೋಗ್ಯ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿನ ಬಾಲ್ಯಾವಸ್ಥೆಗೆ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನಮಂತ್ರಇ ಆವಾಸ್ ಯೋಜನೆ, ಅಮೃತ ಸರೋವರ ಯೋಜನೆ, ಜನನಿ ಸುರಕ್ಷಾ ಯೋಜನೆ ಸೇರಿದಂತೆ ವಿವಿಧ ಕೇಂದ್ರ ಪದ್ಧತಿಗಳ ಅವಲೋಕನ ನಡೆಸಲಾಯಿತು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ. ನವೀನ್‍ಬಾಬು, ಜಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಪಿಎಯು ಯೋಜನಾ ನಿರ್ದೇಶಕ ಡಿ.ವಿ ಅಬ್ದುಲ್ ಜಲೀಲ್ ಸ್ವಾಗತಿಸಿದರು. ಎಲ್‍ಎಸ್‍ಜಿಡಿ ಎಎಸ್‍ಒ ಕೆ.ವಿ ಮದನಿ ವಂದಿಸಿದರು.

.jpeg)
