HEALTH TIPS

ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡ: ಅಮೆರಿಕ ಹೇಳಿದ್ದೇನು?

      ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹತ್ಯೆ ಹಿಂದೆ ಭಾರತದ ಕೈವಾಡದ ಕುರಿತ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ವಿಚಾರವನ್ನು ಅಮೆರಿಕ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

      ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಆರೋಪಿಸಿದ ಬೆನ್ನಲ್ಲೇ, ಈ ಆರೋಪಗಳ ಬಗ್ಗೆ ತಾನು ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ಅಮೆರಿಕ ಹೇಳಿದೆ. 

     ಈ ಕುರಿತು ಇಮೇಲ್ ಹೇಳಿಕೆಯಲ್ಲಿ ಮಾತನಾಡಿರುವ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ ವ್ಯಾಟ್ಸನ್, "ಪ್ರಧಾನಿ ಜಸ್ಟಿನ್ ಟ್ರುಡೊ ಬಹಿರಂಗಪಡಿಸಿದ ಆರೋಪಗಳ ಬಗ್ಗೆ ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿದೆ. ಕೆನಡಾದ ತನಿಖೆ ಮುಂದುವರೆಯುವುದು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ತರುವುದು ನಿರ್ಣಾಯಕವಾಗಿದೆ" ಎಂದು ಹೇಳಿದ್ದಾರೆ. 

     ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕೆನಡಾದೊಂದಿಗೆ ನಿಕಟವಾಗಿ ಸಂಪರ್ಕದಲ್ಲಿ ಇರುತ್ತೇವೆ. ಕೆನಡಾದ ತನಿಖೆ ಮುಂದುವರೆದು ಅಪರಾಧಿಗಳಿಗೆ ಶಿಕ್ಷೆ ಕೊಡಿಸೋದು ಮುಖ್ಯವಾಗಿದೆ ಎಂದು ಅಮೆರಿಕ ನ್ಯಾಷನಲ್‌ ಸೆಕ್ಯುರಿಟಿ ಕೌನ್ಸಿಲ್‌ ವಕ್ತಾರೆ ಆಡ್ರಿನ್‌ ವ್ಯಾಟ್ಸನ್‌ ಹೇಳಿದ್ದಾರೆ.

      ಜೂನ್‌ ತಿಂಗಳಲ್ಲಿ ಹತ್ಯೆಯಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಟ್ರುಡೋ ಗಂಭೀರ ಅರೋಪ ಮಾಡಿದ್ದಾರೆ. ಈ ಬಗ್ಗೆ ಅಲ್ಲಿನ ಸಂಸತ್‌ನಲ್ಲಿ ನಡೆದ ತುರ್ತು ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ, ನಿಜ್ಜರ್‌ ಹತ್ಯೆ ಹಿಂದೆ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಅನ್ನೋದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ. ಜೊತೆಗೆ ನಮ್ಮ ನೆಲದ ಮೇಲೆ ನಡೆದ ಹತ್ಯೆಯಲ್ಲಿ ಬೇರೆ ದೇಶದ ಸರ್ಕಾರಗಳು ಭಾಗಿಯಾಗಿರೋದನ್ನ ಒಪ್ಪಿಕೊಳ್ಳೋಕೆ ಸಾಧ್ಯವಿಲ್ಲ. ಇದರಿಂದ ನಮ್ಮ ಸಾರ್ವಭೌಮತ್ವ ಹಾಗೂ ಪ್ರಜಾಪ್ರಭುತ್ವದ ನಿಯಮಗಳ ಉಲ್ಲಂಘನೆಯಾಗುತ್ತದೆ. ಅಲ್ಲದೆ ಇತ್ತೀಚೆಗೆ G20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯವರ ಬಳಿ ಈ ವಿಚಾರವನ್ನ ಪ್ರಸ್ತಾಪಿಸಿದ್ದೆ ಎಂದು ಟ್ರುಡೋ ಹೇಳಿದ್ದಾರೆ. 

      ಇನ್ನು ಅತ್ತ ನಿಜ್ಜರ್‌ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ. ಈ ಹಿನ್ನಲೆಯಲ್ಲಿ ಭಾರತದ ಹಿರಿಯ ಗುಪ್ತಚರ ಅಧಿಕಾರಿಯನ್ನ ಕೆನಡಾದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಕೆನಡಾ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ. 

      ಇತ್ತ ಕೆನಡಾದ ಆರೋಪಕ್ಕೆ ಭಾರತ ಪ್ರತಿಕ್ರಿಯಿಸಿದ್ದು, ಈ ಆರೋಪಗಳು ಆಧಾರರಹಿತ ಮತ್ತು ಉದ್ದೇಶಪೂರ್ವಕ ಅಂತ ತಿರಸ್ಕರಿಸಿದ್ದು ಮಾತ್ರವಲ್ಲದೇ ಕೆನಡಾದ ನಡೆಯನ್ನು ತೀವ್ರವಾಗಿ ಟೀಕಿಸಿರುವ ಭಾರತ, ಭಯೋತ್ಪಾದಕರಿಗೆ ಸಾರ್ವಜನಿಕವಾಗಿ ಸಿಂಪತಿ ತೋರಿಸೋದು ಕಳವಳಕಾರಿ ವಿಷಯ ಅಂತ ಹೇಳಿದೆ.

      ಈ ರೀತಿ ಆಧಾರರಹಿತ ಆರೋಪ ಮಾಡುವ ಮೂಲಕ ಕೆನಡಾ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಮೇಲಿದ್ದ ಗಮನವನ್ನ ಬದಲಿಸಲು ಬಯಸುತ್ತಿದೆ. ಅಲ್ಲದೆ ಕೆನಡಾದಲ್ಲಿ ಆಶ್ರಯ ಪಡೆದಿರುವ ಈ ಉಗ್ರರಿಂದ ಭಾರತದ ಸಾರ್ವಭೌಮತೆಗೆ ಹಾಗೂ ಸಮಗ್ರತೆಗೆ ಬೆದರಿಕೆ ಹಾಕ್ತಿವೆ. ಆದರೆ ಕೆನಡಾ ಸರ್ಕಾರ ಈ ವಿಷಯದಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ಇರೋದು ಅತಿದೊಡ್ಡ ಕಳವಳದ ಸಂಗತಿ ಅಂತ ಭಾರತದ ವಿದೇಶಾಂಗ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries