ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂದಿ ವಾರಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಪ್ರಭಾರ ಉಪಕುಲಪತಿ ಪೆÇ್ರ. ರಾಜೇಂದ್ರ ಪಿಲಾಂಗಟ್ಟೆ ಉದ್ಘಾಟಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಪೆÇ್ರ. ಮನು ಅಧ್ಯಕ್ಷತೆ ವಹಿಸಿದ್ದರು. ಅಸೋಸಿಯೇಟ್ ಪೆÇ್ರಫೆಸರ್, ವಾರ್ಧಾ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ ಅಸೋಸಿಯೇಟ್ ಪ್ರೊಫೆಸರ್ ಡಾ. ಉಮೇಶ್ ಕುಮಾರ್ ಮುಖ್ಯ ಭಾಷಣ ಮಾಡಿ, ದೇಶದ ಎಲ್ಲಾ ಭಾಷೆಗಳ ಪದಗಳು ಮತ್ತು ಸಂಸ್ಕøತಿಗಳನ್ನು ಸಂಯೋಜಿಸುವ ಮೂಲಕ ಹಿಂದಿ ರಾಷ್ಟ್ರೀಯ ಭಾಷೆಯಾಗಿ ನಿರಂತರವಾಗಿ ವಿಕಸನಗೊಳ್ಳುತ್ತಿದೆ ಎಂದು ಅವರು ತಿಳಿಸಿದರು. ರಿಜಿಸ್ಟ್ರಾರ್ ಡಾ. ಎಂ. ಮುರಳೀಧರನ್ ನಂಬಿಯಾರ್, ಪರೀಕ್ಷಾ ನಿಯಂತ್ರಕ ಡಾ. ಆರ್. ಜಯಪ್ರಕಾಶ ಉಪಸ್ಥಿತರಿದ್ದರು. ಹಿಂದಿ ಅಧಿಕಾರಿ ಡಾ. ಟಿ.ಕೆ ಅನೀಶ್ ಕುಮಾರ್ ಸ್ವಾಗತಿಸಿ, ಹಿಂದಿ ಅನುವಾದಕಿ ಅಮಿತಾ ಎಸ್ ವಂದಿಸಿದರು. ಹಿಂದಿಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಅಂಗವಾಗಿ ಹಿಂದಿ ಶೋಭಾಯಾತ್ರೆ ಆಯೋಜಿಸಲಾಗಿತ್ತು. ವಿಶ್ವವಿದ್ಯಾನಿಲಯದ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು, ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಹಿಂದಿ ಶಿಕ್ಷಕರು ಭಾಗವಹಿಸಿದ್ದರು. ವಿವಿಧ ಶಾಲೆಗಳ ಹಿಂದಿ ಶಿಕ್ಷಕರಿಗೆ ಹಿಂದಿ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು.

