ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಗುರುಪೀಠ ಪ್ರತಿಷ್ಠಾ ವಾರ್ಷಿಕ ದಿನಾಚರಣೆ ಮಂಗಳವಾರ ನಡೆಯಿತು. ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವೇದಮೂರ್ತಿ ಹರಿನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಗಣಹೋಮ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ ಮುಂತಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಓಣಂ ಹಬ್ಬದ ಶುಭದಿನದಲ್ಲಿ ಅಸಂಖ್ಯ ಭಕ್ತಾದಿಗಳು ಭಾಗವಹಿಸಿ ಶ್ರೀ ಸತ್ಯನಾರಾಯಣ ದೇವರ ಪ್ರಸಾದ ಸ್ವೀಕರಿಸಿ ಧನ್ಯರಾದರು.
ಈ ಸಂದರ್ಭದಲ್ಲಿ ಪುತ್ತೂರಿನ ವಿದುಷಿ ಡಾ.ಸುಚಿತ್ರಾ ಹೊಳ್ಳ ಮತ್ತು ಶಿಷ್ಯೆಯರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಸಿಕೊಟ್ಟರು.




.jpg)
