ಮ0ಜೇಶ್ವರ: ಜಿಲ್ಲಾಧಿಕಾರಿ ಇನ್ಬಾಶೇಖರ್ ಅವರು ಭಾನುವಾರ ಮಂಜೇಶ್ವರ ತಾಲೂಕು ಕಚೇರಿ ಹಾಗೂ ಇಚ್ಲಂಗೋಡು ಗ್ರಾಮ ಕಚೇರಿಗಳಿಗೆ ಭೇಟಿ ನೀಡಿದರು.
ಮಂಜೇಶ್ವರ ತಾಲೂಕು ಕಚೇರಿಗೆ ಭೇಟಿ ನೀಡಿ ತಾಲೂಕು ಕಚೇರಿಯ ಕಾರ್ಯಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಮಂಜೇಶ್ವರಂ ತಾಲೂಕು ಕಚೇರಿಗೆ ಕಟ್ಟಡ ನಿರ್ಮಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇಚ್ಲಂಗೋಡು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಿಂದ ಅದಾಲತ್
ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಇಚ್ಲಂಗೋಡು ಗ್ರಾಮ ಕಚೇರಿಗೆ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಭೇಟಿ ನೀಡಿ ಅದಾಲತ್ ನಡೆಸಿದರು.
ಭೂದಾಖಲೆ, ನೀರಾವರಿ, ರಾಷ್ಟ್ರೀಯ ಕುಟುಂಬ ಕಲ್ಯಾಣ ಧನಸಹಾಯ ಹೀಗೆ ವಿವಿಧ ಸಮಸ್ಯೆಗಳ ಕುರಿತು ಏಳು ದೂರುಗಳನ್ನು ಜಿಲ್ಲಾಧಿಕಾರಿ ಸ್ವೀಕರಿಸಿದರು. ಅರ್ಜಿದಾರರ ಅಹವಾಲುಗಳನ್ನು ನೇರವಾಗಿ ಆಲಿಸಿದ ಜಿಲ್ಲಾಧಿಕಾರಿಗಳು ದೂರುಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.




.jpg)
.jpg)
