HEALTH TIPS

ಪಟಾಕಿ ನಿಷೇಧಕ್ಕೆ ದೆಹಲಿ ಸರ್ಕಾರ ನಿರ್ಧಾರ

                ವದೆಹಲಿ : ಎಲ್ಲಾ ರೀತಿಯ ಪಟಾಕಿ ಉತ್ಪಾದನೆ, ಮಾರಾಟ, ಸಂಗ್ರಹ ಮತ್ತು ಬಳಕೆ ಮೇಲೆ ಮತ್ತೆ ನಿಷೇಧ ಹೇರಲು ದೆಹಲಿ ಸರ್ಕಾರ ನಿರ್ಧರಿಸಿದೆ. ಚಳಿಗಾಲದಲ್ಲಿ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಸೋಮವಾರ ತಿಳಿಸಿದರು.

                    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈ ಕುರಿತಂತೆ ದೆಹಲಿ ಪೊಲೀಸರು ಕಠಿಣ ನಿರ್ದೇಶನಗಳನ್ನು ಹೊರಡಿಸಲಿದ್ದಾರೆ' ಎಂದರು.

              'ಕಳೆದ ಐದಾರು ವರ್ಷಗಳಿಂದ ದೆಹಲಿಯ ವಾಯುಗುಣಮಟ್ಟ ಸುಧಾರಿಸುತ್ತಿದೆ. ಇನ್ನೂ ಸುಧಾರಿಸಬೇಕಾದ ಅಗತ್ಯವಿದೆ. ಹಾಗಾಗಿ ಈ ವರ್ಷವೂ ಪಟಾಕಿ ಬಳಕೆಗೆ ನಿಷೇಧ ಹೇರುವ ನಿರ್ಧಾರ ಕೈಗೊಂಡಿದ್ದೇವೆ' ಎಂದು ತಿಳಿಸಿದರು.

               ದೆಹಲಿ ಸರ್ಕಾರ ಕಳೆದ ಮೂರು ವರ್ಷಗಳಿಂದ ಎಲ್ಲಾ ರೀತಿ ಪಟಾಕಿಗಳಿಗೆ ನಿಷೇಧ ಹೇರುತ್ತಿದೆ.

ಕಳೆದ ವರ್ಷ ಸರ್ಕಾರ, ನಗರದಲ್ಲಿ ದೀಪಾವಳಿಯಲ್ಲಿ ಪಟಾಕಿ ಹಚ್ಚುವವರಿಗೆ ಗರಿಷ್ಠ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ₹200 ದಂಡ ವಿಧಿಸಲಾಗುವುದು. ಪಟಾಕಿ ಸಂಗ್ರಹ ಮತ್ತು ಪೂರೈಕೆ ಮಾಡುವವರಿಗೆ ಗರಿಷ್ಠ 3 ವರ್ಷ ಜೈಲು ಶಿಕ್ಷೆ ಮತ್ತು ₹5000ವರೆಗೆ ದಂಡ ವಿಧಿಸಲಾಗುವುದು ಎಂದು ಘೋಷಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries