ಕಾಸರಗೋಡು: ಶ್ರೀಕೃಷ್ಣ ಜಯಂತಿ ಆಚರಣೆ ಸಂಬಂಧ ಹೊಜದುರ್ಗ ಪೋಲೀಸ್ ಠಾಣೆಯಲ್ಲಿ ಸರ್ವಪಕ್ಷ ಸಭೆ ಆಯೋಜಿಸಲಾಯಿತು. ಹೊಸದುರ್ಗ ಠಾಣೆ ಇನ್ಸ್ ಪೆಕ್ಟರ್ ಕೆ.ಪಿ.ಶೈನ್ ಅಧ್ಯಕ್ಷತೆ ವಹಿಸಿದ್ದರು. ಸಬ್ ಇನ್ಸ್ ಪೆಕ್ಟರ್ ಕೆ.ರಾಜೀವನ್, ಜನಮೈತ್ರಿ ಬೀಟ್ ಅಧಿಕಾರಿ ಟಿ.ವಿ.ಪ್ರಮೋದ್, ಠಾಣೆ ವ್ಯಾಪ್ತಿಯ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಶ್ರೀಕೃಷ್ಣ ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲು ಹಾಗೂ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಮೆರವಣಿಗೆಗಳನ್ನು ಆಯೋಜಿಸಲು ಸಭೆ ಸರ್ವಾನುಮತದಿಂದ ನಿರ್ಧರಿಸಿತು. ಕಾರ್ಯಕ್ರಮದ ಯಶಸ್ಸಿಗೆ ಪೆÇಲೀಸರು ಕೈಗೊಂಡಿರುವ ಕ್ರಮಗಳಿಗೆ ಬೆಂಬಲ ನೀಡುವುದಾಗಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ¨ಭರವಸೆ ನೀಡಿದರು.


