ಕೋಝಿಕ್ಕೋಡ್: ರಾಜ್ಯದಲ್ಲಿ ಮತ್ತೆ ನಿಪಾ ಭೀತಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಕೋಝಿಕ್ಕೋಡ್ನಲ್ಲಿ ಜ್ವರದಿಂದ ಅಸಹಜ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಿಪಾ ಸೋಂಕು ಶಂಕೆ ವ್ಯಕ್ತವಾಗಿದ್ದರೂ ಇನ್ನೂ ದೃಢಪಟ್ಟಿಲ್ಲ.
ಮೃತರ ಸಂಬಂಧಿಕರು ಕೂಡ ತೀವ್ರ ನಿಗಾ ಘಟಕದಲ್ಲಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಪರೀಕ್ಷೆಯ ಫಲಿತಾಂಶಗಳು ಬಂದ ನಂತರವೇ ವಿಷಯಗಳು ಹೆಚ್ಚು ಸ್ಪಷ್ಟವಾಗುತ್ತವೆ.