ಕಾಸರಗೋಡು: ಕೇರಳ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮೂರು ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ. ರಾಜ್ಯದ ಉತ್ತಮ ಪ್ರೌಢಶಾಲಾ ಶಿಕ್ಷಕಿ ಪ್ರಶಸ್ತಿಗೆ ಕಂಬಲ್ಲೂರ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಮಲಯಾಳ ವಿಭಾಗದ ಶಿಕ್ಷಕಿ ಕೆ.ಆರ್.ಲತಾಭಾಯಿ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಆಯಂಬಾರ ಸರ್ಕಾರಿ ಹಿರಿಯ ಪ್ರಥಮಿಕ ಶಾಲಾ ಶಿಕ್ಷಕ ಎಂ. ದಿವಾಕರನ್ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೋವಿಕ್ಕಾನ ಎಯುಪಿ ಶಾಲೆಯ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಇಂಗ್ಲಿಷ್ ಶಿಕ್ಷಕ ಕೆ. ಉಣ್ಣಿಕೃಷ್ಣನ್ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.





