ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 15 ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆ ಇದೆ.
ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 15 ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆ ಇದೆ.
ಸೆ. 8ರಂದು ಅಮೆರಿಕಾ, ಮಾರಿಷಸ್ ಹಾಗೂ ಬಾಂಗ್ಲಾದೇಶದ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಸೆ. 9ರಂದು ಜಿ20 ಸಭೆ ನಡೆಯಲಿದೆ. ಸಭೆಯ ನಂತರ ಬ್ರಿಟನ್, ಜಪಾನ್, ಇಟಲಿ ಹಾಗೂ ಜರ್ಮನಿ ದೇಶದ ಪ್ರಮುಖರೊಂದಿಗೆ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ಸೆ. 10ರಂದು ಫ್ರಾನ್ಸ್‌ನ ಅಧ್ಯಕ್ಷ ಇಮಾನ್ಯುಯಲ್ ಮಾಕ್ರಾನ್ ಜತೆ ಮಧ್ಯಾಹ್ನದ ಭೋಜನ ಮಾಡಲಿದ್ದಾರೆ. ಇದೇ ವೇಳೆ ಇಬ್ಬರು ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಕೆನಡಾ, ಕ್ಯಾಮರೂಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಐರೋಪ್ಯ ಒಕ್ಕೂಟ, ಬ್ರೆಜಿಲ್ ಹಾಗೂ ನೈಜಿರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೂ ಪ್ರಧಾನಿ ಮೋದಿ ಅವರ ಸಭೆ ಆಯೋಜನೆಗೊಂಡಿದೆ ಎಂದೆನ್ನಲಾಗಿದೆ.