ನವದೆಹಲಿ: ದೇಶದ ಜನ ಅಕ್ಟೋಬರ್ 1ರಂದು ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರೆ ನೀಡಿದ್ದಾರೆ.
0
samarasasudhi
ಅಕ್ಟೋಬರ್ 01, 2023
ನವದೆಹಲಿ: ದೇಶದ ಜನ ಅಕ್ಟೋಬರ್ 1ರಂದು ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, 'ಸ್ವಚ್ಛತೆಗಾಗಿ ದೊಡ್ಡ ಕಾರ್ಯಕ್ರಮವೊಂದು ಭಾನುವಾರ (ಅ.1ರಂದು) ನಡೆಯಲಿದೆ. ನೀವು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ನೀವು ನಿಮ್ಮ ಬೀದಿಗಳಲ್ಲಿ, ನೆರೆಹೊರೆಯಲ್ಲಿ, ಉದ್ಯಾನದಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಇದರಲ್ಲಿ ಭಾಗಿಯಾಗಬಹುದು' ಎಂದು ಹೇಳಿದ್ದರು.
ಗಾಂಧಿ ಜಯಂತಿ ಸಂದರ್ಭದಲ್ಲಿ ಜನ ಖಾದಿ ಉತ್ಪನ್ನಗಳನ್ನು ಖರೀದಿಸಬೇಕು ಎಂದೂ ಮೋದಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.