ನವದೆಹಲಿ: ಕೇಂದ್ರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ಫ್ಲ್ಯಾಟ್‌ನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಕ್ಕಳು ಸೇರಿದಂತೆ 16 ಜನರನ್ನು ರಕ್ಷಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 22, 2023
ನವದೆಹಲಿ: ಕೇಂದ್ರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ಫ್ಲ್ಯಾಟ್‌ನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಕ್ಕಳು ಸೇರಿದಂತೆ 16 ಜನರನ್ನು ರಕ್ಷಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡ ಬಗ್ಗೆ ಬೆಳಿಗ್ಗೆ 7:40 ರ ಸುಮಾರಿಗೆ ಕರೆ ಬಂದಿತ್ತು.
ಫ್ಲ್ಯಾಟ್‌ನೊಳಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದಾಗಿತ್ತು. ಸದ್ಯ, ಬೆಂಕಿಯನ್ನು ನಂದಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಅವರು ಹೇಳಿದರು.
ಅಗ್ನಿ ಅವಘಡಕ್ಕೆ ಕಾರಣ ಪತ್ತೆಗಾಗಿ ತನಿಖೆ ಪ್ರಾರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.