HEALTH TIPS

2036ರ ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಸಿದ್ಧ: ಪ್ರಧಾನಿ ಮೋದಿ

              ಣಜಿ: ದೇಶದ ಆಯವ್ಯಯದಲ್ಲಿ ಕ್ರೀಡೆಗೆ ಮೀಸಲಿಟ್ಟ ಹಣ 9 ವರ್ಷ ಹಿಂದಿನ ಮೊತ್ತಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಡಗಾಂವ್‌ನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ 37ನೇ ರಾಷ್ಟ್ರೀಯ ಕ್ರೀಡೆಗಳನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

            ಭಾರತ 2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸಲು ಸಿದ್ಧವಾಗಿದೆ ಎಂದು ಪುನುರಚ್ಚರಿಸಿದ ಮೋದಿ, 'ಟಾಪ್ಸ್‌ (ಟಾರ್ಗೆಟ್‌ ಒಲಿಂಪಿಕ್‌ ಪೋಡಿಯಂ) ಕಾರ್ಯಕ್ರಮದ ಮೂಲಕ ಅಥ್ಲೀಟುಗಳಿಗೆ ಅತ್ಯುತ್ತಮ ತರಬೇತಿ ಸೌಲಭ್ಯ ಸಿಗುವಂತೆ ನೋಡಿಕೊಳ್ಳಲಾಗಿದೆ. ಭಾರತ 2030ರ ವಿಶ್ವ ಯೂತ್‌ ಒಲಿಂಪಿಕ್ಸ್‌ ಹಾಗೂ 2036ರ ಒಲಿಂಪಿಕ್ಸ್‌ ಆಯೋಜಿಸಲು ಸಜ್ಜಾಗಿದೆ' ಎಂದರು.

              ಇತ್ತೀಚಿನ ವರ್ಷಗಳಲ್ಲಿ ಭಾರತ ಕ್ರೀಡಾಕ್ಷೇತ್ರದಲ್ಲಿ ಸಾಧಿಸುತ್ತಿರುವ ಯಶಸ್ಸು ಯುವ ಮನಸ್ಸುಗಳಿಗೆ ಪ‍್ರೇರಣಾದಾಯಿಯಾಗಿದೆ ಎಂದು ಹೇಳಿದರು. ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 107 ಪದಕಗಳನ್ನು ಗೆದ್ದು ದಾಖಲೆ ಸ್ಥಾಪಿಸಿದ್ದನ್ನು ಅವರು ಪ್ರಸ್ತಾಪಿಸಿದರು.

              2014ರ ನಂತರ ಭಾರತದಲ್ಲಿ ಹಲವು ಕ್ರೀಡಾ ಮೂಲ ಸೌಕರ್ಯಗಳನ್ನು ನಿರ್ಮಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿದೆ. ಅಥ್ಲೀಟುಗಳಿಗೆ ನೀಡುವ ಪ್ರೋತ್ಸಾಹಧನದ ಮೊತ್ತದಲ್ಲಿ ಏರಿಕೆಯಾಗಿದೆ ಎಂದು ವಿವರ ನೀಡಿದರು.

                43 ವಿವಿಧ ಕ್ರೀಡೆಗಳಲ್ಲಿ ದೇಶದ ವಿವಿಧ ರಾಜ್ಯಗಳ 10,000ಕ್ಕೂ ಹೆಚ್ಚು ಅಥ್ಲೀಟುಗಳು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾ ಸಚಿವ ಅನುರಾಗ್ ಠಾಕೂರ್‌, ಗೋವಾ ರಾಜ್ಯಪಾಲ ಪಿ.ಎಸ್‌.ಶ್ರೀಧರನ್ ಪಿಳ್ಳೈ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ಭಾರತ ಒಲಿಂಪಿಕ್‌ ಸಂಸ್ಥೆ ಅಧ್ಯಕ್ಷೆ ಪಿ.ಟಿ.ಉಷಾ ಮೊದಲಾದವರು ಭಾಗವಹಿಸಿದ್ದರು.

                  ಭವಾನಿ ದೇವಿಗೆ ಚಿನ್ನ: ಒಲಿಂಪಿಯನ್ ಭವಾನಿ ದೇವಿ ಅವರು ಫೆನ್ಸಿಂಗ್ (ಸೇಬರ್‌ ವಿಭಾಗ) ಸ್ಪರ್ಧೆಯಲ್ಲಿ ಕೇರಳದ ಎಸ್.ಸೌಮ್ಯಾ ಅವರನ್ನು 15-5ರಿಂದ ಸೋಲಿಸಿ ಚಿನ್ನ ಗೆದ್ದರು. 2022ರ ಕೂಟದಲ್ಲೂ ಅವರು ಇದೇ ಸಾಧನೆ ಮಾಡಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries