ಗ್ಯಾಂಗ್ಟಕ್: ಸಿಕ್ಕಿಂನಲ್ಲಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ತೀಸ್ತಾ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು 23 ಯೋಧರು ನಾಪತ್ತೆಯಾಗಿದ್ದಾರೆ. ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಸೇನೆ ತಿಳಿಸಿದೆ.
ಈ ಕುರಿತು ಸೇನೆಯ ಪೂರ್ವ ವಲಯದ ಕಮಾಂಡ್ ಹೇಳಿಕೆ ಬಿಡುಗಡೆ ಮಾಡಿದ್ದು 'ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿರುವುದರಿಂದ ನೀರಿನ ಮಟ್ಟವು 15-20 ಅಡಿ ಹಠಾತ್ ಹೆಚ್ಚಳಕ್ಕೆ ಕಾರಣವಾಗಿದೆ.
ಇದು ಸಿಂಗ್ಟಾಮ್ ಬಳಿಯ ಬರ್ದಂಗ್ನಲ್ಲಿ ನಿಲ್ಲಿಸಿದ್ದ ಸೇನಾ ವಾಹನಗಳಿಗೆ ಪರಿಣಾಮ ಬೀರಿದ್ದು, 23 ಸಿಬ್ಬಂದಿ ಕಾಣೆಯಾಗಿದ್ದಾರೆ. ಕೆಲವು ವಾಹನಗಳು ಕೆಸರಿನಲ್ಲಿ ಮುಳುಗಿವೆ, ಶೋಧ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಹೇಳಿದೆ.
ರಾತ್ರಿಯಿಡೀ ಭಾರಿ ಮಳೆಯಾದ ಪರಿಣಾಮ ಉತ್ತರ ಸಿಕ್ಕಿಂನಲ್ಲಿರುವ ಲೊನಾಕ್ ಸರೋವರದ ಬಳಿ ಮೇಘಸ್ಫೋಟ ಸಂಭವಿಸಿದೆ. ಹೀಗಾಗಿ ಸಿಕ್ಕಿಂ ಆಡಳಿತ ನಿವಾಸಿಗಳಿಗೆ ಹೈ ಅಲರ್ಟ್ ನೀಡಿದೆ.