ಮುಳ್ಳೇರಿಯ: ಮವ್ವಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಭೆ ಶ್ರೀ ಕ್ಷೇತ್ರದಲ್ಲಿ ಭಾನುವಾರ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ ಅಧ್ಯಕ್ಷತೆ ವಹಿಸಿದ್ದರು. ಡಿ. 24ರಿಂದ ಮೊದಲ್ಗೊಂಡು 29ರ ತನಕ ಬ್ರಹ್ಮಕಲಶೋತ್ಸವ ನಡೆಯಲಿರುವುದರಿಂದ ಜೀರ್ಣೋದ್ಧಾರ ಕಾರ್ಯಗಳು, ವಿವಿಧ ಸಮಿತಿಗಳ ಜವಾಬ್ದಾರಿಯನ್ನು ಚರ್ಚಿಸಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಗೌರವಾಧ್ಯಕ್ಷ ಅನಂತ ಭಟ್ ಕುರುಮುಜ್ಜಿ, ಗೌರವ ಸಲಹೆಗಾರರಾದ ರಾಘವ ಮಣಿಯಾಣಿ ಬೆಳ್ಳಿಗೆ, ಕಾರ್ಯದರ್ಶಿ ಕೃಷ್ಣಮೂರ್ತಿ ಎಡಪ್ಪಾಡಿ, ಆಡಳಿತ ಮೊಕ್ತೇಸರ ವಕೀಲ ನಾರಾಯಣ ಭಟ್, ಅಗಲ್ಪಾಡಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಉಪ್ಪಂಗಳ ವಾಸುದೇವ ಭಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ಸ್ವಾಗತಿಸಿ, ಕಾರ್ಯದರ್ಶಿ ರಾಜೇಂದ್ರ ಮವ್ವಾರು ವಂದಿಸಿದರು.

.jpg)
