ಕೆವಡಿಯ: ಭಾರತದ ಅಭಿವೃದ್ಧಿಗೆ ಮುಂದಿನ 25 ವರ್ಷಗಳು ಅತ್ಯಂತ ಮಹತ್ವದ್ದಾಗಿದ್ದು, ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಕನಸನ್ನು ಸಾಕಾರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ಧಾರೆ.
0
samarasasudhi
ಅಕ್ಟೋಬರ್ 31, 2023
ಕೆವಡಿಯ: ಭಾರತದ ಅಭಿವೃದ್ಧಿಗೆ ಮುಂದಿನ 25 ವರ್ಷಗಳು ಅತ್ಯಂತ ಮಹತ್ವದ್ದಾಗಿದ್ದು, ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಕನಸನ್ನು ಸಾಕಾರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ಧಾರೆ.
ಏಕತಾ ದಿನದ ಅಂಗವಾಗಿ ಇಲ್ಲಿನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ನಿರ್ಮಿಸಲಾಗಿರುವ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಮೋದಿ ಮಾತನಾಡಿದರು.
'ಕಾಶ್ಮೀರ ಮತ್ತು ದೇಶದ ನಡುವೆ ಇದ್ದ ಗೋಡೆಯನ್ನು 370ನೇ ವಿಧಿ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ ಮೂಲಕ ತೆಗೆದು ಹಾಕಲಾಗಿದೆ' ಎಂದು ಅವರು ಹೇಳಿದರು
1875 ರಲ್ಲಿ ಗುಜರಾತ್‌ನಲ್ಲಿ ಜನಿಸಿದ ಪಟೇಲ್ ಅವರು ವಕೀಲರಾಗಿದ್ದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಹಾತ್ಮ ಗಾಂಧಿಯವರ ಜತೆ ಗುರುತಿಸಿಕೊಂಡವರು. ಗೃಹ ಮಂತ್ರಿಯಾಗಿದ್ದ ಅವರು, ದೇಶದಲ್ಲಿದ್ದ ನೂರಾರು ರಾಜಮನೆತನಗಳನ್ನು ಭಾರತ ಒಕ್ಕೂಟ ವ್ಯವಸ್ಥೆಗೆ ಸೇರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ ಎಂದರು .