HEALTH TIPS

ಅಕ್ಟೋಬರ್ 26, 27ರಂದು ಕುಂಬಳೆ ಉಪಜಿಲ್ಲಾ ವಿಜ್ಞಾನ ಮೇಳ: ಪೆರಡಾಲ ನವಜೀವನ ಶಾಲೆಯಲ್ಲಿ ಸ್ವಾಗತ ಸಮಿತಿ ರೂಪೀಕರಣ

               ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅಕ್ಟೋಬರ್ 26,27 ರಂದು ನಡೆಯಲಿರುವ ಕುಂಬಳೆ ಉಪಜಿಲ್ಲಾ ವಿಜ್ಞಾನ ಮೇಳದ ಸ್ವಾಗತ ಸಮಿತಿ ರೂಪೀಕರಣ ಸಭೆ ಮಂಗಳವಾರ ಶಾಲಾ ಸಭಾ ಭವನದಲ್ಲಿ ಜರಗಿತು. ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷೆ ಶಾಂತಾ ಬಿ. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮೂರಿನಲ್ಲಿ ನಡೆಯುವ ಉಪಜಿಲ್ಲಾ ಮಟ್ಟದ ಅತೀದೊಡ್ಡ ಕಾರ್ಯಕ್ರಮವಿದಾಗಿದೆ. ಇದನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿ ಮುಂದುವರಿಯಬೇಕು. ಗ್ರಾಮಪಂಚಾಯಿತಿ ವತಿಯಿಂದ ಎಲ್ಲಾ ಸಹಕಾರವನ್ನು ನೀಡುವುದಾಗಿ ತಿಳಿಸಿದರು. 

            ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಲೀಂ ಎಡನೀರು ಅಧ್ಯಕ್ಷತೆ ವಹಿಸಿದ್ದರು. ಪುತ್ತಿಗೆ ಗ್ರಾಮಪಂಚಾಯಿತಿ ಅಧ್ಯಕ್ಷ ಸುಬ್ಬಣ್ಣ ಆಳ್ವ, ಕುಂಬ್ಡಾಜೆ ಗ್ರಾಪಂ ಅಧ್ಯಕ್ಷ ಹಮೀದ್ ಪೊಸೊಳಿಗೆ, ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಎಂ., ಕುಂಬ್ಡಾಜೆ ಗ್ರಾಮಪಂಚಾಯತಿ ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಶಾಫಿ ಚೂರಿಪಳ್ಳ, ಬಿಪಿಸಿ ಜಯರಾಂ, ಪ್ರಭಾವತಿ ಕೆದಿಲಾಯ ಪುಂಡೂರು, ಪ್ರಭಾಕರನ್ ನಾಯರ್, ಪ್ರಸನ್ನ, ಅಬಕಾರಿ ಇಲಾಖೆಯ ಅಧಿಕಾರಿ ವಿನು, ಸಿಎಚ್‍ಸಿ ಆರೋಗ್ಯಾಧಿಕಾರಿ ರಾಜೇಶ್, ಎಚ್.ಎಂ.ಪೋರಂ ಸಂಚಾಲಕ ವಿಷ್ಣುಪಾಲ, ಮಾತೃಸಮಿತಿ ಅಧ್ಯಕ್ಷೆ ರೇಷ್ಮಾ, ಸುರೇಂದ್ರ ಉಪಸ್ಥಿತರಿದ್ದರು. ಪ್ರಾಂಶುಪಾಲ ಮಾಧವನ್ ಭಟ್ಟತ್ತಿರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಿನಿ ಸ್ವಾಗತಿಸಿ, ಸಹ ಮುಖ್ಯೋಪಾಧ್ಯಾಯಿನಿ ಶಾಯಿದಾ ಬಿ.ವಿ. ವಂದಿಸಿದರು. ಕುಂಬಳೆ ಉಪಜಿಲ್ಲೆಯ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳು, ಶಿಕ್ಷಕ ಸಂಘಟನೆಯ ಪ್ರತಿನಿಧಿಗಳು, ಶಾಲಾ ರಕ್ಷಕರು, ಸ್ಥಳೀಯರು ಭಾಗಹಿಸಿದ್ದರು. ಶಾಲಾ ಮಕ್ಕಳು ಪ್ರಾರ್ಥನೆ ಹಾಡಿದರು. ಶಿಕ್ಷಕರಾದ ಪ್ರಸಾದ್, ನಾರಾಯಣ ಆಸ್ರ ನಿರೂಪಿಸಿದರು. ನಿರಂಜನ ರೈ ಪೆರಡಾಲ, ರಾಜೇಶ್ ಅಗಲ್ಪಾಡಿ, ನಾರಾಯಣ ಮುರಿಯಂಕೂಡ್ಲು , ಉಣ್ಣಿಕೃಷ್ಣನ್ ಸಹಕರಿಸಿದರು. ಸಭೆಯಲ್ಲಿ ವಿವಿಧ ಸಮಿತಿಗಳು, ಉಪಸಮಿತಿಗಳನ್ನು ರೂಪೀಕರಿಸಲಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries