HEALTH TIPS

ನ.2ರಂದು ಕೇಜ್ರಿವಾಲ್ ಬಂಧನ ಸಾಧ್ಯತೆ, ನಾವು ಜೈಲಿಗೆ ಹೋಗಲು ಹೆದರುವುದಿಲ್ಲ: ಅತಿಶಿ

               ವದೆಹಲಿ: ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.2ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸುವ ಸಾಧ್ಯತೆ ಇದೆ ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.

                 ನಮ್ಮ ಪಕ್ಷದ ಅಧ್ಯಕ್ಷರನ್ನು (ಕೇಜ್ರಿವಾಲ್‌) ಬಂಧಿಸುವ ಮೂಲಕ ಅವರನ್ನು ಮುಗಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

                ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.2ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿತ್ತು.

                 ಪಿಎಂಎಲ್‌ಎ ಕಾಯ್ದೆಯಡಿ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಲಾಗಿದೆ. ತನಿಖಾ ಸಂಸ್ಥೆಯು ಅಂದು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿದ್ದವು.

ಈ ಪ್ರಕರಣ ಸಂಬಂಧ ಇ.ಡಿ ಕೇಜ್ರಿವಾಲ್‌ಗೆ ಸಮನ್ಸ್‌ ನೀಡಿರುವುದು ಇದೇ ಮೊದಲು.

ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌ ನೀಡಿರುವ ಕುರಿತು ಮಾತನಾಡಿದ ದೆಹಲಿ ಸಚಿವೆ ಅತಿಶಿ, 'ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಿರುವ ಕಾರಣ ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಈ ತಂತ್ರಗಳನ್ನು ಬಳಸುತ್ತಿದೆ' ಎಂದು ದೂರಿದ್ದಾರೆ.

ಕೇಜ್ರಿವಾಲ್ ಅವರನ್ನು ನ. 2ರಂದು ಬಂಧಿಸುವ ಸಾಧ್ಯತೆ ಕುರಿತು ವರದಿಗಳಿವೆ. ಒಂದು ವೇಳೆ ಅವರನ್ನು ಬಂಧಿಸಿದರೆ, ಅದು ಭ್ರಷ್ಟಾಚಾರದ ಕಾರಣಕ್ಕಲ್ಲ. ಹೊರತುಪಡಿಸಿ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ಮಾತನಾಡಿದ್ದಾರೆ ಎಂಬುದೇ ಬಂಧನಕ್ಕೆ ಮುಖ್ಯ ಕಾರಣ ಎಂದು ಅತಿಶಿ ವಾಗ್ದಾಳಿ ನಡೆಸಿದ್ದಾರೆ.

              ಎಎಪಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರಿ ಮತ್ತು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಅರವಿಂದ್ ಕೇಜ್ರಿವಾಲ್‌ಗೆ ಹೆದರುತ್ತಾರೆ. ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ತಿಳಿದಿದೆ ಎಂದು ಅತಿಶಿ ಕಿಡಿಕಾರಿದ್ದಾರೆ.

                ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಎಎಪಿಯ ಪ್ರಮುಖ ನಾಯಕರ ಬಂಧನವನ್ನು ಉಲ್ಲೇಖಿಸಿರುವ ಅತಿಶಿ, ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಕೇಜ್ರಿವಾಲ್‌ರನ್ನು ಬಂಧಿಸಿದ ಬಳಿಕ ಬಿಜೆಪಿ ಸಿಬಿಐ ಮತ್ತು ಇ.ಡಿಯನ್ನು ಬಳಸಿಕೊಂಡು 'ಇಂಡಿಯಾ' ಮೈತ್ರಿಕೂಟದ ಇತರ ನಾಯಕರು ಮತ್ತು ಅದರ ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ದಾಳಿ ನಡೆಸಲಿದೆ ಎಂದು ಅತಿಶಿ ಆರೋಪಿಸಿದ್ದಾರೆ.

                ಎಎಪಿ ನಾಯಕರು ಜೈಲಿಗೆ ಹೋಗಲು ಹೆದರುವುದಿಲ್ಲ. ತಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನವನ್ನು ಉಳಿಸಲು ಹೋರಾಡುತ್ತಲೇ ಇರುತ್ತೇವೆ ಎಂದು ಅವರು ಪುನರುಚ್ಚರಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries