ಕುಂಬಳೆ: ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ನ ಶತಮಾನೋತ್ಸವ ಸಮಾರಂಭ ಹಾಗೂ ನವೀಕೃತ ಕಟ್ಟಡದ ಉದ್ಘಾಟನೆ ನವೆಂಬರ್ 4 ರಂದು ಚೆರುಗೋಳಿಯಲ್ಲಿ ನಡೆಯಲಿದೆ ಎಂದು ಸಂಬಂಧಪಟ್ಟವರು ಶುಕ್ರವಾರ ಕುಂಬಳೆ ಪ್ರೆಸ್ ಪೋರಂನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಂದು ಬೆಳಿಗ್ಗೆ 9.30ಕ್ಕೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಟ್ಟಡ ಉದ್ಘಾಟಿಸುವರು. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವರು. ಸಹಕಾರ ಸದನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್, ಬಡ್ಡಿ ರಹಿತ ಸಾಲ ಯೋಜನೆಯನ್ನು ಅಡಿಟ್ ವಿಭಾಗದ ಸಹ ನಿರ್ದೇಶಕ ರಾಮ, ಸ್ಮರಣ ಸಂಚಿಕೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸುವರು.
ಬ್ಯಾಂಕ್ ಅಧ್ಯಕ್ಷ ಪ್ರೇಮ್ ಕುಮಾರ್, ಮಂಗಲ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಬೀನಾ ನೌಫಲ್, ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಉಪಸ್ಥಿತರಿದ್ದು ಮಾತನಾಡಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 100ನೇ ವμರ್Áಚರಣೆ ಸಂದರ್ಭದಲ್ಲಿ ನೂರು ಸದಸ್ಯರಿಗೆ ಗೃಹ ಪರಿಕರ ಖರೀದಿಗೆ 50 ಸಾವಿರ ರೂ.ಗಳ ಬಡ್ಡಿ ರಹಿತ ಸಾಲ ನೀಡಲಾಗುವುದು.
ಜೊತೆಗೆ ಈ ಸಂದರ್ಭ ಹಿಂದಿನ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು. ಉಪ್ಪಳ ಮತ್ತು ನಯಾಬಜಾರ್, ಬಂದ್ಯೋಡು ಎಂಬ ಮೂರು ಶಾಖೆಗಳು ಸಹಕಾರಿ ಬ್ಯಾಂಕಿನ ಅಡಿ ಕಾರ್ಯನಿರ್ವಹಿಸುತ್ತಿವೆ ಎಂದು ಸಂಬಂಧಪಟ್ಟವರು ಮಾಹಿತಿ ನೀಡಿದರು.
ಬ್ಯಾಂಕ್ ಅಧ್ಯಕ್ಷ ಪ್ರೇಮಕುಮಾರ್ ಕೆ.ಪಿ.ಅರಿಯಾಳ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಿರ್ದೇಶಕರಾದ ಭರತ್ ರೈ, ರವೀಶ್ ಕೊಡಂಗೆ, ಕಾರ್ಯದರ್ಶಿ ಪಿ. ಬಾಲಸುಬ್ರಮಣ್ಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

.jpg)
