ಕೊಚ್ಚಿ: ಕಲಮಸ್ಸೆರಿ ಟಿಫಿನ್ ಬಾಂಬ್ ದಾಳಿಯಲ್ಲಿ 52 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮೃತ ಮಹಿಳೆಯ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸುಟ್ಟಗಾಯಗಳಾಗಿ ಚಿಕಿತ್ಸೆ ಪಡೆದವರಲ್ಲಿ 18 ಮಂದಿ ಐಸಿಯುನಲ್ಲಿದ್ದಾರೆ. ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ತೀವ್ರ ನಿಗಾ ಘಟಕದಲ್ಲಿ 10 ಮಂದಿ ಇದ್ದಾರೆ. ಇವರಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. 12 ವರ್ಷದ ಬಾಲಕಿ ಕೂಡ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶೇ.90ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಗಾಯಾಳುಗಳಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುವುದು ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೋಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಶ್ವಾನದಳದ ಸಹಾಯದಿಂದ ರೈಲು ನಿಲ್ದಾಣಗಳು, ಶಾಪಿಂಗ್ ಮಾಲ್‍ಗಳು ಮತ್ತು ಪ್ರವಾಸಿ ತಾಣಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಇಂದು ಬೆಳಗ್ಗೆ 9.35 ರಿಂದ 45ರ ರ ಸುಮಾರಿಗೆ ಕಲಮಸ್ಸೆರಿಯಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಭೆಯ ವೇಳೆ ಈ ಸ್ಫೋಟ ಸಂಭವಿಸಿದೆ. ಮೂರು ಸ್ಥಳಗಳಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯನ್ನು ಯೋಜಿಸಲಾಗಿತ್ತು ಎಂದು ಪೋಲೀಸರು ಖಚಿತಪಡಿಸಿದ್ದಾರೆ. ಸ್ಫೋಟಕ್ಕೆ ಐಇಡಿ ಸಾಧನ ಬಳಸಲಾಗಿದೆ ಎಂದು ಡಿಜಿಪಿ ಶೇಖ್ ದರ್ವೇಶ್ ಸಾಹಿಬ್ ಮಾಹಿತಿ ನೀಡಿದ್ದಾರೆ. ಸಮಾವೇಶ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಪೆÇಲೀಸರು ಸಂಗ್ರಹಿಸಿದ್ದಾರೆ. ಘಟನೆಯ ವಿವರವಾದ ತನಿಖೆಗಾಗಿ ಎನ್‍ಐಎ ತಂಡ ಕಲಮಶ್ಶೇರಿ ತಲುಪಿದೆ.





