ನವದೆಹಲಿ: ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಹಮಾಸ್ ವಿರುದ್ಧದ ಯುದ್ಧ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.
0
samarasasudhi
ಅಕ್ಟೋಬರ್ 10, 2023
ನವದೆಹಲಿ: ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಹಮಾಸ್ ವಿರುದ್ಧದ ಯುದ್ಧ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.
ದೂರವಾಣಿ ಕರೆ ಬಗ್ಗೆ ಎಕ್ಸ್ (ಟ್ವಿಟರ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, 'ನೆತನ್ಯಾಹು ಅವರ ದೂರವಾಣಿ ಕರೆಗಾಗಿ ಮತ್ತು ಅಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ವಿವರಿಸಿದ್ದಕ್ಕೆ ಧನ್ಯವಾದಗಳನ್ನು ಸೂಚಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ. ಭಾರತವು ಭಯೋತ್ಪಾದಕತೆಯನ್ನು ಮತ್ತು ಅದರ ರೂಪಗಳನ್ನು ತೀವ್ರವಾಗಿ ಖಂಡಿಸುತ್ತದೆ' ಎಂದು ಹೇಳಿದ್ದಾರೆ.