ನವದೆಹಲಿ (PTI): ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ 'ನ್ಯೂಸ್‌ಕ್ಲಿಕ್' ಸುದ್ದಿಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ದೆಹಲಿಯ ನ್ಯಾಯಾಲಯದ ಮೊರೆ ಹೋಗಿದ್ದಾರೆ.
0
samarasasudhi
ಅಕ್ಟೋಬರ್ 28, 2023
ನವದೆಹಲಿ (PTI): ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ 'ನ್ಯೂಸ್‌ಕ್ಲಿಕ್' ಸುದ್ದಿಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ದೆಹಲಿಯ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಪಡಿಸಿಕೊಂಡಿರುವ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ವಾಪಸ್ ನೀಡಬೇಕೆಂದು ಕೋರಿ ಸುದ್ದಿಸಂಸ್ಥೆಯ ಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರು ಕೂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಮಿತ್ ಚಕ್ರವರ್ತಿ ಅವರ ಜಾಮೀನು ಅರ್ಜಿಯ ಕುರಿತು ನವೆಂಬರ್ 4ರೊಳಗೆ ಹಾಗೂ ಪುರಕಾಯಸ್ಥ ಅವರ ಅರ್ಜಿಯ ಕುರಿತು ಇದೇ 31ರೊಳಗೆ ಪ್ರತಿಕ್ರಿಯೆ ನೀಡುವಂತೆ ವಿಶೇಷ ನ್ಯಾಯಾಧೀಶರಾದ ಹರ್ದೀಪ್ ಕೌರ್ ಅವರು ದೆಹಲಿ ಪೊಲೀಸರಿಗೆ ಶುಕ್ರವಾರ ನಿರ್ದೇಶನ ನೀಡಿದ್ದಾರೆ.
ಚೀನಾ ಪರ ಪ್ರಚಾರ ಮಾಡಲು ವಿದೇಶದಿಂದ ಹಣ ಪಡೆದ ಆರೋಪದ ಮೇಲೆ ಪುರಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸರು ಬಂಧಿಸಿದ್ದರು.