ನವದೆಹಲಿ: ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಷನ್‌ನ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪವನ್ನು ಅಲ್ಲಗಳೆದಿದ್ದಾರೆ. ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಅವರು ಹೇಳಿದ್ದಾರೆ.
0
samarasasudhi
ಅಕ್ಟೋಬರ್ 09, 2023
ನವದೆಹಲಿ: ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಷನ್‌ನ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪವನ್ನು ಅಲ್ಲಗಳೆದಿದ್ದಾರೆ. ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಅವರು ಹೇಳಿದ್ದಾರೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್‌ಪಾಲ್ ಅವರು ಶನಿವಾರ ಪ್ರಕರಣದ ವಿಚಾರಣೆ ನಡೆಸಿದರು. ಈ ವೇಳೆ ಸಿಂಗ್ ಪರವಾಗಿ ವಕೀಲರು ಈ ಹೇಳಿಕೆ ನೀಡಿದರು.
'ದೂರುದಾರರ ಪೈಕಿ ಒಬ್ಬರು ಲೈಂಗಿಕ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರಾಗಿದ್ದರು. ಅವರು 2012ರಲ್ಲಿ ನಡೆದಿತ್ತು ಎನ್ನಲಾದ ದೌರ್ಜನ್ಯದ ಬಗ್ಗೆ 2023ರ ಏಪ್ರಿಲ್‌ವರೆಗೆ ಬಾಯಿಬಿಟ್ಟಿರಲಿಲ್ಲ' ಎಂದು ವಕೀಲರು ಕೋರ್ಟ್‌ಗೆ ತಿಳಿಸಿದರು.
'2015ರ ಒಲಿಂಪಿಕ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದ ನಂತರ ಅವರು ಬ್ರಿಜ್‌ಭೂಷಣ್ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಪ್ರತಿಯೊಂದು ದೂರಿಗೂ ಒಂದೊಂದು ಕಾರಣಗಳಿವೆ. ಪ್ರತಿ ಆರೋಪವೂ ಸುಳ್ಳು. ಆರೋಪಿಯನ್ನು ಪ್ರಕರಣದಲ್ಲಿ ಸಿಲುಕಿಸಲು ಸುಳ್ಳು ಹೇಳಿಕೆಗಳನ್ನು ನೀಡಲಾಗಿದೆ' ಎಂದೂ ಹೇಳಿದರು.ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿತು.