ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 03, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲೆಯ ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿರುವ ಶಂಕೆ ಇದೆ. ಅವರು ತಪ್ಪಿಸಿಕೊಳ್ಳದಂತೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ.