ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು, ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಗೆ ಅವರು ನೀಡಿದ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ.
0
samarasasudhi
ಅಕ್ಟೋಬರ್ 22, 2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು, ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಗೆ ಅವರು ನೀಡಿದ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ.
'ಭಾರತದ ಪ್ರಗತಿ ಮತ್ತು ಬಡವರಿಗೆ ಉತ್ತಮ ಗುಣಮಟ್ಟದ ಜೀವನವನ್ನು ಖಾತ್ರಿಪಡಿಸಲು ಶಾ ಅವರು ಉತ್ಸುಕರಾಗಿದ್ದಾರೆ.
ಬಿಜೆಪಿಯನ್ನು ಬಲಪಡಿಸುವಲ್ಲಿ ಶಾ ಅವರ ಪಾತ್ರ ಶ್ಲಾಘನೀಯ ಎಂದ ಅವರು, ಅಮಿತ್ ಶಾ ಅವರಿಗೆ ದೇವರು ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಹಾರೈಸಿದ್ದಾರೆ.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿಯ ಇತರ ಪ್ರಮುಖ ನಾಯಕರು ಸಹ ಶಾ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಾಷ್ಟ್ರಕ್ಕೆ ಅಮಿತ್ ಶಾ ಅವರ ಅಸಾಧಾರಣ ಸಮರ್ಪಣೆ, ಪ್ರಾಮಾಣಿಕತೆ ಮತ್ತು ಸಂಘಟನಾ ಕೌಶಲ್ಯವನ್ನು ಶ್ಲಾಘಿಸಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿಯವರ ನಿಕಟವರ್ತಿ, ಸಹಕಾರ ಸಚಿವರೂ ಆಗಿರುವ ಶಾ, ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯ ಅಭ್ಯುದಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ.