HEALTH TIPS

ಪಾಕ್‌ನಿಂದ 'ಗೌರಿ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

                 ಸ್ಲಾಮಾಬಾದ್ (PTI): ಪಾಕಿಸ್ತಾನವು ಮಂಗಳವಾರ 'ಗೌರಿ' ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ವಾರವಷ್ಟೇ 'ಅಬಬೀಲ್' ಕ್ಷಿಪಣಿಯ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತ್ತು.

               ಕ್ಷಿಪಣಿಯ ವ್ಯವಸ್ಥೆಯು ಕಾರ್ಯನಿರ್ವಹಣೆ ಮತ್ತು ತಾಂತ್ರಿಕವಾಗಿ ಕರಾರುವಕ್ಕಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಪ್ರಯೋಗ ನಡೆಸಲಾಯಿತು ಎಂದು ತಿಳಿಸಿದೆ.

             ಸೇನೆಯ ಎಎಸ್‌ಎಫ್‌ಸಿ ತುಕಡಿಯ ಕಮಾಂಡರ್, ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು, ಎಂಜಿನಿಯರ್‌ಗಳು ಈ ಸಂದರ್ಭದಲ್ಲಿ ಹಾಜರಿದ್ದರು.

               ಪಾಕಿಸ್ತಾನದ ಕ್ಷಿಪಣಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಪರಿಕರ ಪೂರೈಸಿದ ಚೀನಾದ ಮೂರು ಕಂಪನಿಗಳ ಮೇಲೆ ಅಮೆರಿಕವು ನಿರ್ಬಂಧ ವಿಧಿಸಿದ ಬೆಳವಣಿಗೆಯ ನಂತರ ಪಾಕಿಸ್ತಾನವು ಈ ಕ್ಷಿಪಣಿ ಪ್ರಯೋಗವನ್ನು ಕೈಗೊಂಡಿದೆ. ಪಾಕಿಸ್ತಾನಕ್ಕೆ ಅಗತ್ಯವಿರುವ ಸೇನಾ ಪರಿಕಗಳನ್ನು ಚೀನಾ ಪ್ರಮುಖವಾಗಿ ಪೂರೈಸುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries