ತಿರುವನಂತಪುರ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್ ಸೆಂಟರ್) ಇಂದು (ಭಾನುವಾರ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
0
samarasasudhi
ಅಕ್ಟೋಬರ್ 29, 2023
ತಿರುವನಂತಪುರ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್ ಸೆಂಟರ್) ಇಂದು (ಭಾನುವಾರ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಪಿಣರಾಯಿ ಜತೆ ಅಮಿತ್ ಶಾ ಚರ್ಚೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿದ್ದು, ಸ್ಫೋಟದ ಕುರಿತಂತೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಭಯೋತ್ಪಾದನಾ ನಿಗ್ರಹ ಪಡೆ, ರಾಷ್ಟ್ರೀಯ ಭದ್ರತಾ ಸಿಬ್ಬಂದಿ(ಎನ್‌ಎಸ್‌ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.