ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಎದುರು ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸಲು ಯತ್ನಿಸಿದ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
0
samarasasudhi
ಅಕ್ಟೋಬರ್ 24, 2023
ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಎದುರು ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸಲು ಯತ್ನಿಸಿದ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಜೆಎನ್‌ಯು, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ದೆಹಲಿ ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಸೇರಿದ್ದರು.
ರಾಯಭಾರ ಕಚೇರಿ ಎದುರು ಪ್ರತಿಭಟನೆ ನಡೆಸಲು ಅಗತ್ಯವಾದ ಅನುಮತಿಯನ್ನು ಹೊಂದಿಲ್ಲದ ಕಾರಣ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಯಿತು. 'ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಲು ಯಾರಿಗೂ ಅವಕಾಶವಿಲ್ಲ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ದೆಹಲಿ ಘಟಕದ ಅಧ್ಯಕ್ಷ ತಿಳಿಸಿದ್ದಾರೆ.