ಕುಂಬಳೆ: ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿದ್ದು, ಸ್ಥಳೀಯರ ಮಧ್ಯ ಪ್ರವೇಶದಿಂದ ವಿದ್ಯಾರ್ಥಿಗಳನ್ನು ಚದುರಿಸಲಾಗಿದೆ. ಹತ್ತನೇ ತರಗತಿ ಮತ್ತು ಪ್ಲಸ್‍ವನ್ ತರಗತಿ ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆದು, ನಂತರ ಹೊಡೆದಾಟದಲ್ಲಿ ಕೊನೆಗೊಂಡಿದೆ.
ಕಳೆದ ಎರಡು ವರ್ಷಗಳಿಂದ ಶಾಲಾ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆಯುತ್ತಿದ್ದು, ಶಾಲಾ ಅಧಿಕಾರಿಗಳಿಗೆ ಹಾಗೂ ಹೆತ್ತವರಿಗೆ ತಲೆನೋವಾಗಿ ಪರಿಣಮಿಸಿದೆ.




