ಬದಿಯಡ್ಕ : ಕ್ರೀಡೆ, ಆಟೋಟಗಳು ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಉತ್ತಮಪಡಿಸಲು ಪೂರಕ ಎಂದು ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿ ಕರುಣಾಕರ ಅವರು ಅಭಿಪ್ರಾಯಪಟ್ಟರು.
ಬದಿಯಡ್ಕ ಬೋಳುಕಟ್ಟೆ ಕ್ರೀಡಾಂಗಣದಲ್ಲಿ ಬುಧವಾರ ಕುಂಬಳೆ ಉಪಜಿಲ್ಲಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಗ್ರಾಮ ಪಂಚಾಯತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಜಿಲ್ಲಾ ಕಾರ್ಯದರ್ಶಿ ಶಶಿಕಾಂತ್, ಮುಖ್ಯ ಶಿಕ್ಷಕ ಸಂಘದ ವಿಷ್ಣು ಪಾಲ್, ಪಂಚಾಯತಿ ಶಿಕ್ಷಣ ಸಮಿತಿಯ ಸುಬ್ರಹ್ಮಣ್ಯ ಭಟ್, ಪೆರಡಾಲ ಸರ್ಕಾರಿ ಪ್ರೌಢಶಾಲೆಯ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಕರೋಡಿ, ಶಿಕ್ಷಕ ಸಂಘದ ಕಾರ್ಯದರ್ಶಿ ರಿಶಾದ್ ಉಪಸ್ಥಿತರಿದ್ದರು. ನಾಲ್ಕು ದಿನಗಳಲ್ಲಿ ಉಪಜಿಲ್ಲೆಯ ವಿವಿಧ ಶಾಲೆಗಳ ನೂರಾರು ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

.jpg)
