ಮಂಜೇಶ್ವರ: ರಾಜ್ಯದ 140 ವಿಧಾನಸಭಾ ಕ್ಷೇತ್ರಗಳ ಮುಖ್ಯಮಂತ್ರಿ ಮತ್ತು ಸಚಿವರು ನೇರವಾಗಿ ಭಾಗವಹಿಸುವ ನವ ಕೇರಳ ಸದಸ್ ನ ಮೊದಲ ವೇದಿಕೆ ಮಂಜೇಶ್ವರಕ್ಕೆ ಒದಗಿಬಂದಿದೆ. ನವಕೇರಳ ಸದಸ್ ನವೆಂಬರ್ 18 ರಂದು ಮಧ್ಯಾಹ್ನ 3.30 ಕ್ಕೆ ಪ್ರಾರಂಭವಾಗಲಿದೆ. ಒಂದು ಕ್ಷೇತ್ರದಲ್ಲಿ ಮೂರು ಗಂಟೆಗಳ ಕಾಲ ನಡೆಯುವ ನವಕೇರಳ ಸಮಾವೇಶದಲ್ಲಿ ಮೊದಲ ಎರಡು ಗಂಟೆಯಲ್ಲಿ ಕಲಾ ಕಾರ್ಯಕ್ರಮಗಳು ಸೇರಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಅನುಷ್ಠಾನಗೊಳ್ಳುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ವಿವರಿಸಲಿದ್ದಾರೆ. ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯ ಅತಿಥಿಗಳು ಎರಡು ಗಂಟೆಗಳ ಕಾಲ ವೇದಿಕೆಯಲ್ಲಿರುತ್ತಾರೆ. ಕ್ಷೇತ್ರದ ಕಲೆ, ಸಂಸ್ಕøತಿ ಕ್ಷೇತ್ರದ ಪ್ರಮುಖರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಪಡೆದವರು ಭಾಗವಹಿಸಲಿದ್ದಾರೆ.
ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಮಾತ್ರ ಅರ್ಜಿ ಸ್ವೀಕರಿಸಲು ಅಧಿಕಾರಿಗಳನ್ನೊಳಗೊಂಡ ವಿಶೇಷ ಸಮಿತಿ ರಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

