ಕಾಸರಗೋಡು: ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧದ ತನಿಖೆ ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಘಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ತಿಳಿಸಿದ್ದಾರೆ.ಅವರು ಸರ್ಕಾರಿ ಇಲಾಖೆಗಳನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಮತ್ತು ಸರ್ಕಾರದಿಂದ ಸಾರ್ವಜನಿಕರಿಗೆ ದಕ್ಷ ಸೇವೆ ಒದಗಿಸಿಕೊಡುವ ನಿಟ್ಟಿನಲ್ಲಿ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಅನುಷ್ಠಾನಗೊಳಿಸುತ್ತಿರುವ ಜಿಲ್ಲಾ ಜಾಗೃತ ಸಮಿತಿ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರ ಶೋಷಣೆಗೆ ಅವಕಾಶ ನೀಡದೆ, ಜಿಲ್ಲೆಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಜಿಲೆನ್ಸ್ ದಳದ ಮೊಬೈಲ್ ಸಂಖ್ಯೆ ಪ್ರದರ್ಶಿಸಬೇಕು. ಮುಂದಿನ ಜಿಲ್ಲಾ ಜಾಗೃತ ಸಮಿತಿ ಸಭೆಯಲ್ಲಿ ಭ್ರಷ್ಟಾಚಾರ ರಹಿತ ನಾಳೆಗಾಗಿ ವಿವಿಧ ಇಲಾಖೆಗಳು ಸಭೆ ನಡೆಸಬೇಕು, ಜತೆಗೆ ತೀರ್ಮಾನಗಳ ಮಿನುಟ್ಸ್ ಒದಗಿಸಬೇಕು. ಕೆಲವು ಇಲಾಖೆಗಳಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಅ. 30ರಂದು ಗ್ರಾ.ಪಂ.ಅಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಜಾಗೃತದಳದ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ವಿಜಿಲೆನ್ಸ್ ಡಿವೈಎಸ್‍ಪಿ ವಿ.ಕೆ.ವಿಶ್ವಂಭರನ್ ನಾಯರ್ ಜಾಗೃತ ಸಮಿತಿಯ ಚಟುವಟಿಕೆಗಳನ್ನು ವಿವರಿಸಿದರು. ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮದ್, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ. ನವೀನ್ ಬಾಬು, ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು, ಸಾರ್ವಜನಿಕ ವಿಭಾಗದ ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧೀಗಳು ಉಪಸ್ಥಿತರಿದ್ದರು. ಜಿಲ್ಲಾ ಜಾಗೃತ ದಳದ ಪೆÇಲೀಸ್ ನಿರೀಕ್ಷಕ ಕೆ.ಸುನುಮೋನ್ ಸ್ವಾಗತಿಸಿದರು. ಜಿಲ್ಲಾ ಜಾಗೃತ ಘಟಕದ ಎಎಸ್‍ಐ ವಿ.ಟಿ.ಸುಭಾಷ್ ಚಂದ್ರನ್ ವಂದಿಸಿದರು.




