ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 05, 2023
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇ.ಡಿ ಬಂಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕೆಲವರ ಸ್ಥಳಗಳ ಮೇಲೂ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ. ಲಂಚವನ್ನು ನೀಡಿದ ಕೆಲವು ಡೀಲರ್‌ಗಳಿಗೆ ಅನುಕೂಲ ಮಾಡಿಕೊಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಆರೋಪಗಳನ್ನು ಎಎಪಿ ಬಲವಾಗಿ ನಿರಾಕರಿಸಿತ್ತು.
ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ನೀತಿಯನ್ನು ದೆಹಲಿ ಸರ್ಕಾರ ರದ್ದು ಮಾಡಿತ್ತು. ಪ್ರಕರಣ ಕುರಿತಂತೆ ಸಿಬಿಐ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ್ದರು, ನಂತರ, ಇ.ಡಿ ಅಕ್ರಮ ಹಣ ಸಾಗಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಪ್ರಕರಣವನ್ನು ದಾಖಲಿಸಿಕೊಂಡಿತ್ತು.
51 ವರ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಜೊತೆ ನಂಟು ಹೊಂದಿರುವ ಸಿಬ್ಬಂದಿ ಮತ್ತು ಇತರರನ್ನು ಇ.ಡಿ ಈ ಹಿಂದೆ ವಿಚಾರಣೆಗೆ ಒಳಪಡಿಸಿತ್ತು.