ನವದೆಹಲಿ: ವಿಶೇಷವಾಗಿ ಪೂರ್ವ ಲಡಾಖ್ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿನ ಪರಿಸ್ಥಿತಿ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 04, 2023
ನವದೆಹಲಿ: ವಿಶೇಷವಾಗಿ ಪೂರ್ವ ಲಡಾಖ್ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿನ ಪರಿಸ್ಥಿತಿ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮುಂದಿನ ಏಳೆಂಟು ವರ್ಷಗಳಲ್ಲಿ ₹2.5 ಲಕ್ಷದಿಂದ ₹3 ಲಕ್ಷ ಕೋಟಿ ಮೌಲ್ಯದ ಯುದ್ಧ ಸಲಕರಣೆಗಳು, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಭಾರತೀಯ ವಾಯುಪಡೆ ಚಿಂತನೆ ನಡೆಸಿದೆ.
ರಷ್ಯಾದಿಂದ ಮೂರು ಎಸ್-400 ಕ್ಷಿಪಣಿ ವ್ಯವಸ್ಥೆಗಳು ಭಾರತದ ವಾಯುಪಡೆಗೆ ಸೇರ್ಪಡೆಯಾಗಿದ್ದು, ಉಳಿದ ಎರಡು ಕ್ಷಿಪಣಿಗಳು ಮುಂದಿನ ವರ್ಷದೊಳಗೆ ಬರುವ ಸಾಧ್ಯತೆಯಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.