HEALTH TIPS

ಕೇರಳ ಸ್ಫೋಟ ಬೆನ್ನಲ್ಲೇ ದೆಹಲಿಯಲ್ಲಿ ಹೈ ಅಲರ್ಟ್: ಹಲವೆಡೆ ಬಿಗಿ ಪೊಲೀಸ್ ಭದ್ರತೆ

            ವದೆಹಲಿ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್‌ ಸೆಂಟರ್) ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ.

             ಈ ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಮುಖ ಮಾರುಕಟ್ಟೆಗಳು, ಚರ್ಚ್‌ಗಳು, ಮೆಟ್ರೊ ನಿಲ್ದಾಣ, ಬಸ್ ನಿಲ್ದಾಣ, ರೈಲು ನಿಲ್ದಾಣಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

               ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಸಿವಿಲ್ ಡ್ರೆಸ್ ಮತ್ತು ಪಿಸಿಆರ್‌ನಲ್ಲಿರುವ ಪೊಲೀಸರು ಜಾಗರೂಕರಾಗಿರಲು ತಿಳಿಸಲಾಗಿದೆ. ಜತೆಗೆ, ಅವರಿಗೆ ಬರುವ ಯಾವುದೇ ಮಾಹಿತಿಯನ್ನು ನಿರ್ಲಕ್ಷಿಸದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

              ದೆಹಲಿ ಪೊಲೀಸರ ವಿಶೇಷ ಘಟಕವು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries