ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಮಂಗಲ್ಪಾಡಿ ಗ್ರಾಮ ಪಂಚಾಯತಿ ಪುಳಿಕುತ್ತಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಅನುμÁ್ಠನಗೊಳ್ಳುತ್ತಿರುವ ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯೋಜನೆಯ ಕಾಮಗಾರಿಯನ್ನು ಶಾಸಕ ಎಂ.ಕೆ.ಎಂ.ಅಶ್ರಫ್ ಸೋಮವಾರ ಉದ್ಘಾಟಿಸಿದರು.
ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯೋಜನೆಯು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮತ್ತು 30 ಅಥವಾ ಅದಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳನ್ನು ಹೊಂದಿರುವ ಕಾಲೋನಿಗಳ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಜಾರಿಗೊಳಿಸಲಾದ ಯೋಜನೆ ಇದಾಗಿದೆ.
ಮಂಗಲ್ಪಾಡಿ ಪಂಚಾಯತಿ ಅಧ್ಯಕ್ಷೆ ಫಾತಿಮತ್ ರುಬೀನಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್ ಭಾಗವಹಿಸಿದ್ದರು. ಮಂಜೇಶ್ವರ ಬ್ಲಾಕ್ ಸದಸ್ಯರಾದ ಫಾತಿಮಾ ಸುಹರ, ಅಶೋಕ, ಮಂಗಲ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಾಬು ಬಂದ್ಯೋಡು, ವಿ.ವಿ.ಸುಧಾ, ಜಿಲ್ಲಾ ಪರಿಶಿಷ್ಟ ಜಾತಿ ಸಲಹಾ ಸಮಿತಿ ಸದಸ್ಯರಾದ ರಾಮಚಂದ್ರ ಮಾಸ್ತರ್, ಕೆ.ಜಯಕುಮಾರ್, ಕಾಲೋನಿ ಪ್ರತಿನಿಧಿಗಳಾದ ದಿನೇಶ್ ಪುಳಿಕುತ್ತಿ, ಪ್ರಮೋದಾ ಟೀಚರ್ ಮಾತನಾಡಿದರು. ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್.ಮೀನಾರಾಣಿ ಸ್ವಾಗತಿಸಿ, ಮಂಜೇಶ್ವರ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ತಿರುಮಲೇಶ್ ವಂದಿಸಿದರು. ಮಂಜೂರುಗೊಂಡ ಒಟ್ಟು 98,74,241 ರೂ. ಮೊತ್ತ ಬಳಸಿ ಮನೆ ನವೀಕರಣ, ಕಾಂಕ್ರೀಟ್ ರಸ್ತೆ, ಸ್ಮಶಾನದ ಒಳಗೆ ಸೋಲಾರ್ ಲೈಟ್ ಮತ್ತು ನೀರಿನ ಸೌಲಭ್ಯಕ್ಕಾಗಿ ಮಂಜೂರು ಮಾಡಲಾಗಿದೆ. ಜಿಲ್ಲಾ ನಿರ್ಮಿತಿ ಕೇಂದ್ರವು ಅನುಷ್ಠಾನದ ಹೊಣೆ ಹೊತ್ತಿದೆ.




.jpg)
