ಕಾಸರಗೋಡು: ನವದೆಹಲಿಯಲ್ಲಿ ನಡೆಯಲಿರುವ ಪ್ರಥಮ ರಾಷ್ಟ್ರೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಸರಗೋಡು ಜಿಲ್ಲೆಯಿಂದ ಇಬ್ಬರು ಶಾಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದೆಹಲಿ ಘಟಕದ ಸಹಯೋಗದಲ್ಲಿ 2023 ನವೆಂಬರ್ 15ರಂದು ನವದೆಹಲಿಯ ಶ್ರೀ ಸತ್ಯಸಾಯಿ ಸಭಾಂಗಣದಲ್ಲಿ ಪ್ರಥಮ ರಾಷ್ಟ್ರೀಯ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ಹೊರನಾಡು ಗಡಿನಾಡು ಘಟಕಗಳ ವ್ಯಾಪ್ತಿಯಲ್ಲಿ ತಲಾ ಇಬ್ಬರನ್ನು ಆಯ್ಕೆ ಮಾಡಿ ಮಕ್ಕಳ ಕವಿ ಗೋಷ್ಠಿ ಮತ್ತು ಮಕ್ಕಳ ಸಾಹಿತ್ಯ ವಿಚಾರಗೋಷ್ಠಿಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಹೆತ್ತವರು ಹಾಗೂ ಪೆÇೀಷಕರೊಂದಿಗೆ ಪಾಲ್ಗೊಳ್ಳುವ ಮಕ್ಕಳಿಗೆ ನವದೆಹಲಿಯಲ್ಲಿ ವಸತಿ ಊಟೋಪಚಾರದ ವ್ಯವಸ್ಥೆ ಇರಲಿದೆ. ಹೋಗಿ ಬರುವ ಪ್ರಯಾಣದ ವ್ಯವಸ್ಥೆಯನ್ನು ಭಾಗವಹಿಸುವವರು ಬರಿಸಬೇಕಾಗುತ್ತದೆ. ಕರ್ನಾಟಕ ರಾಜ್ಯದಿಂದ ಮಾಧ್ಯಮದವರು ಕವಿ, ಸಾಹಿತಿ, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಆಹ್ವಾನಿತರು ಘಟಕದ ಅಧ್ಯಕ್ಷರೊಂದಿಗೆ ಸುಮಾರು 300 ಮಂದಿ ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವರಾಮ ಕಾಸರಗೋಡು ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ ) ಕೇರಳ ರಾಜ್ಯದ ಕನ್ನಡ ಗ್ರಾಮರಸ್ತೆ, ಕಾಸರಗೋಡು 671121
(ಮೊಬೈಲ್ :-9448572016) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

