ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ನಡೆದಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ 17 ಸದಸ್ಯರ ನಿಯೋಗವು ಮಂಗಳವಾರ ಹೈದರಾಬಾದ್ಗೆ ಭೇಟಿ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಲ್ಲಿನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಲ್ಲಿ ತೆಲಂಗಾಣ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ಅವರು ನಿಯೋಗವನ್ನು ಸ್ವಾಗತಿಸಿದರು. ಮೂರು ದಿನ ರಾಜ್ಯದಲ್ಲೇ ಇರಲಿರುವ ಈ ನಿಯೋಗವು ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜತೆ ಸಭೆ ನಡೆಸಲಿದೆ.
ಬುಧವಾರ ಚುನಾವಣೆ ಪೂರ್ವ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರ ಜತೆ ಸಭೆ ನಡೆಸಲಿದ್ದು, ಈ ವೇಳೆ ರಾಜ್ಯದ 33 ಜಿಲ್ಲೆಗಳ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದಂತೆ ಆಯೋಗಕ್ಕೆ ವಿವರಣೆ ನೀಡಲಿದ್ದಾರೆ.