ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಡುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಅವೈಜ್ಞಾನಿಕವಾದ ರೀತಿಯಲ್ಲಿ ಷಟ್ಪಥ ರಾ.ಹೆದ್ದಾರಿ ಕಾಮಗಾರಿ ಪೂರ್ತಿಗೊಳಿಸಿದ ಯು ಎಲ್ ಸಿ ಸಿ ಅಧಿಕೃತರ ವಿರುದ್ಧ ಜಾತಿ ಧರ್ಮವನ್ನು ಮರೆತು ಊರ ನಾಗರಿಕರು ಭಾನುವಾರ ರಸ್ತೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ಶವವನ್ನಿರಿಸಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ನಿಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಸಾವನ್ನಪ್ಪಿದ ವಿದ್ಯಾರ್ಥಿ.
ಸುಮಂತ್ ನ ತಲೆಗೆ ಗಂಭೀರ ಗಾಯಗಳಾಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವು ಸಂಭವಿಸಿದೆ. ಶುಕ್ರವಾರ ಸಂಜೆ ಕಾಲೇಜು ಮುಗಿಸಿ, ಮನೆಗೆ ಹಿಂತಿರುಗುವ ವೇಳೆ ಉದ್ಯಾವರ ಮಾಡದಲ್ಲಿ ಬಸ್ಸಿಳಿದು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಟುತ್ತಿರುವಾಗ ಇನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತ್ತು.
ರಾ. ಹೆದ್ದಾರಿಯ ಕಾಮಗಾರಿಯ ಗುತ್ತಿಗೆದಾರರಾಗಿರುವ ಯು ಎಲ್ ಸಿ ಸಿ ಇಷ್ಟರ ತನಕ ಕಾಮಗಾರಿಯ ಡಿ ಪಿ ಆರ್ ಜನಪ್ರತಿನಿಧಿಗಳಿಗಾಗಲೀ ನಾಗರೀಕರು ಮಾಹಿತಿ ಹಕ್ಕು ಖಾಯಿದೆ ಪ್ರಕಾರ ಕೇಳಿದ ಅರ್ಜಿಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂಬುದಾಗಿ ಪ್ರತಿಭಟನಾ ನಿರತರು ಆರೋಪಿಸಿದರು. ಕೂಡಲೇ ಎಲ್ಲಾ ಜಂಕ್ಷನ್ ಗಳಲ್ಲೂ ಫುಟ್ ಬ್ರಿಡ್ಜ್ ನಿರ್ಮಿಸಬೇಕು ಹಾಗೂ ಪಾದಾಚಾರಿಗಳಿಗೆ ರಸ್ತೆ ದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.




.jpg)
