HEALTH TIPS

ತಮಿಳುನಾಡಿನಲ್ಲಿ ಹಳಿ ತಪ್ಪಿದ ವಿದ್ಯುತ್ ಚಾಲಿತ​ ರೈಲು: ತಪ್ಪಿದ ಭಾರಿ ದುರಂತ

             ಚೆನ್ನೈ: ತಮಿಳುನಾಡಿನಲ್ಲಿ ವಿದ್ಯುತ್ ಚಾಲಿತ​ ರೈಲೊಂದು ಹಳಿ ತಪ್ಪಿದ್ದು ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

              ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ  ಬೆಳಗ್ಗೆ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್​ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

             ಮೂಲಗಳ ಪ್ರಕಾರ ತಿರುವಳ್ಳೂರಿನಿಂದ ಪುರುಚ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) ಬೆಳಗ್ಗೆ ತಿರುವಳ್ಳೂರಿನಿಂದ ತಿರುಟ್ಟಣಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್​ ರೈಲು ಅಣ್ಣನೂರಿನಿಂದ ಅವಡಿ ತಲುಪಿದ ಬಳಿಕ ಅವಘಡ ಸಂಭವಿಸಿದೆ. ಈ ರೈಲಿನ 4 ಬೋಗಿಗಳು ಹಳಿ ತಪ್ಪಿವೆ ಎಂದು ಹೇಳಲಾಗಿದೆ.

                ರಜಾದಿನವಾದ ಕಾರಣ ರೈಲು ನಿಲ್ದಾಣದಲ್ಲಿ ಜನಸಂದಣಿ ಕಡಿಮೆಯಾಗಿತ್ತು. ಅದೃಷ್ಟವಶಾತ್​ ರೈಲಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಅವಘಡದಿಂದಾಗಿ ಅವಡಿ -ಚೆನ್ನೈ ಮಾರ್ಗವಾಗಿ ತೆರಳುವ ರೈಲುಗಳು, ವಂದೇ ಭಾರತ್​ ಸೇರಿದಂತೆ ಇತರ ಎಲೆಕ್ಟ್ರಿಕ್​ ರೈಲುಗಳು, ಒಟ್ಟಾರೆಯಾಗಿ ರೈಲು ಸೇವೆಗಳ ಸಂಚಾರಕ್ಕೆ ತೊಂದರೆಯಾಗಿದೆ. ಸದ್ಯ ರೈಲು ಭೋಗಿಗಳ ತೆರವು ಕಾರ್ಯಾಚರಣೆಯನ್ನು ರೈಲ್ವೆ ಇಲಾಖೆ ಕೈಗೊಂಡಿದೆ. 

                 ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಅವಘಡಕ್ಕೆ ಚಾಲಕನ ಅಜಾಗರೂಕತೆ ಅಥವಾ ಸಿಗ್ನಲ್​ ವೈಫಲ್ಯ ಕಾರಣವೇ? ಎಂದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries