ಪೆರ್ಲ: ಸಮೀಪದ ಶುಳುವಾಲಮೂಲೆ ಶ್ರೀಸದನದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಭಾನುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
ನಿನ್ನೆ ಮುಂಜಾನೆ 6ಕ್ಕೆ ಮಹಾಗಣಪತಿ ಹೋಮದೊಂದಿಗೆ ಆರಂಭಗೊಂಡು ಸಂಜೆ ಪೂಜೆ, ಸಪ್ತಶತೀ ಪಾರಾಯಣ, ಲಲಿತಾ ಸಹಸ್ರನಾಮ ಪಾರಾಯಣ-ಕುಂಕುಮಾರ್ಚನೆ, ಮಂಗಳಾರತಿ, ಪ್ರಸಾದ ವಿತರಣೆ ಬ್ರಹ್ಮಶ್ರೀ ಶಿವಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಪ್ರತಿನಿತ್ಯ ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 8 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಜೊತೆಗೆ ನಾಳೆಯಿಂದ ಪ್ರತಿನಿತ್ಯ ಸಂಜೆ 6.30 ರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.






