ಕೊಚ್ಚಿ: ಕೇರಳ ಹೈಕೋರ್ಟ್‍ನಲ್ಲಿ ಮೂವರು ನ್ಯಾಯಾಂಗ ಅಧಿಕಾರಿಗಳು ಇಂದು ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನ್ಯಾಯಮೂರ್ತಿಗಳಾದ ಜಾನ್ಸನ್ ಜಾನ್, ಗೋಪಿನಾಥನ್ ಯು ಗಿರೀಶ್, ಸಿ.ಪ್ರದೀಪ್ ಕುಮಾರ್ ಹೆಚ್ಚುವರಿ ಹೈಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇರಳ ಹೈಕೋರ್ಟ್‍ನ ನ್ಯಾಯಮೂರ್ತಿಗಳ ನೇಮಕಕ್ಕೆ ಐವರು ನ್ಯಾಯಾಂಗ ಅಧಿಕಾರಿಗಳ ಹೆಸರನ್ನು ಶಿಫಾರಸು ಮಾಡಿತ್ತು.ಈ ಪೈಕಿ ಮೂವರ ನೇಮಕಕ್ಕೆ ಕೇಂದ್ರವು ಕಳೆದ ವಾರ ಅನುಮೋದನೆ ನೀಡಿತ್ತು.

.webp)
