ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಕೇರಳ ರಾಜ್ಯ ಘಟಕದ 24 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪುನಾರಚಿಸಲು ತೀರ್ಮಾನಿಸಲಾಗಿದ್ದು ಕಾಸರಗೋಡು ಜಿಲ್ಲೆ ಮತ್ತು ಕೇರಳ ರಾಜ್ಯದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಕವಿ, ಸಾಹಿತಿ, ಮಾಧ್ಯಮದವರು, ಅಧ್ಯಾಪಕರು, ವಿದ್ಯಾರ್ಥಿಗಳು, ಕನ್ನಡ ಸಂಘಟಕರನ್ನು ಆಯ್ಕೆ ಮಾಡಿ ಕೇರಳ ರಾಜ್ಯ ಘಟಕದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ವಿಶೇಷಮಹಾ ಸಭೆಯ ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ.

