HEALTH TIPS

ನೇಪಾಳದಲ್ಲಿ ಪ್ರಬಲ ಭೂಕಂಪ: 128ಕ್ಕೂ ಅಧಿಕ ಜನ ಸಾವು

           ಠ್ಮಂಡು: ನೇಪಾಳದ ಪಶ್ಚಿಮ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುಮಾರು 128ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

             ಶುಕ್ರವಾರ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು 10 ಕಿ.ಮೀ ಆಳದಲ್ಲಿದೆ ಎಂದು ‌ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

             'ರುಕುಮ್ ವೆಸ್ಟ್‌ನಲ್ಲಿ ಕನಿಷ್ಠ 36 ಜನರು ಹಾಗೂ ಜಾಜರ್‌ಕೋಟ್‌ನಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ' ಎಂದು ರುಕುಮ್ ವೆಸ್ಟ್‌ನ ಜಿಲ್ಲಾಧಿಕಾರಿ ಹರಿ ಪ್ರಸಾದ್ ಪಂತ್ ತಿಳಿಸಿದ್ದಾರೆ.


              'ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರ್ಖೇತ್‌ಗೆ ಕಳುಹಿಸಲಾಗಿದೆ' ಎಂದು ಜಾಜರ್‌ಕೋಟ್‌ನ ಮುಖ್ಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

                 'ಭೂಕಂಪದಿಂದ ಉಂಟಾದ ಜೀವ ಮತ್ತು ವಸ್ತು ಹಾನಿಯ ಬಗ್ಗೆ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಹಾಗೂ ತುರ್ತು ಪರಿಹಾರಕ್ಕಾಗಿ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ' ಎಂದು ನೇಪಾಳದ ಪಿಎಂಒ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

             ದೆಹಲಿಯಲ್ಲೂ ಕಂಪನದ ಅನುಭವ: ನೇಪಾಳದಲ್ಲಿ ಭೂಕಂಪ ಸಂಭವಿಸಿದ ವೇಳೆ ದೆಹಲಿ, ಎನ್‌ಸಿಆರ್, ಉತ್ತರ ಪ್ರದೇಶ ಹಾಗೂ ಬಿಹಾರ ಸೇರಿದಂತೆ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries