HEALTH TIPS

2016ರ ಪ್ರಕರಣ; ಜಿಗ್ನೇಶ್‌ ಮೇವಾನಿ ಖುಲಾಸೆ

               ಹಮದಾಬಾದ್‌: ಕಾನೂನುಬಾಹಿರವಾಗಿ ಗುಂಪು ಸೇರಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ, ದಲಿತ ನಾಯಕ ಜಿಗ್ನೇಶ್‌ ಮೇವಾನಿ ಮತ್ತು ಇತರ ಆರು ಮಂದಿ ಹೋರಾಟಗಾರರನ್ನು ಇಲ್ಲಿಯ ಮೆಟ್ರೊಪಾಲಿಟನ್‌ ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ.

             ನೈರ್ಮಲ್ಯ ಕಾರ್ಯಕರ್ತರ ಹಕ್ಕುಗಳನ್ನು ಆಗ್ರಹಿಸಿ 2016ರಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮೇವಾನಿ ಅವರೂ ಅದರಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಗೆ ಪೂರ್ವಾನುಮತಿ ‍ಪಡೆದಿರಲಿಲ್ಲ ಮತ್ತು ಪ್ರತಿಭಟನೆ ವೇಳೆ ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಲಾಗಿತ್ತು ಎಂಬ ಆರೋಪದ ಮೇರೆಗೆ ಪ್ರತಿಭಟನಕಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

                ಆರೋಪ ಸಾಬೀತುಪಡಿಸಲು ಸರ್ಕಾರ ಪರ ವಕೀಲರಿಗೆ ಸಾಧ್ಯವಾಗಿಲ್ಲ ಎಂದು ಹೇಳಿರುವ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries