HEALTH TIPS

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ

              ತ್ತರಕಾಶಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ಕಾರ್ಮಿಕರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.


                ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಕಾಶಿಯ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತಿರುವ ದೃಶ್ಯಗಳನ್ನು ಸುದ್ದಿಸಂಸ್ಥೆ ಎಎನ್‌ಐ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಹಂಚಿಕೊಂಡಿದೆ.

                  ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಮಂಗಳವಾರ ಹೊರತರಲಾಯಿತು. ರಕ್ಷಣಾ ತಂಡ 17 ದಿನಗಳ ಸುದೀರ್ಘ ಕಾರ್ಯಾಚರಣೆ ನಡೆಸಿದೆ.

                   ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ಕಳೆದ ಭಾನುವಾರ (ನ.12) ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries