ತಿರುವನಂತಪುರ: ಕೊಚ್ಚಿ ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ.
ಕೊಚ್ಚಿ ವಿಶ್ವವಿದ್ಯಾಲಯದ ವಾರ್ಷಿಕೋತ್ಸವ; ಕಾಲ್ತುಳಿತಕ್ಕೆ 4 ವಿದ್ಯಾರ್ಥಿಗಳ ಸಾವು
0
ನವೆಂಬರ್ 26, 2023
Tags
0
samarasasudhi
ನವೆಂಬರ್ 26, 2023
ತಿರುವನಂತಪುರ: ಕೊಚ್ಚಿ ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ.
ಈ ವಿಷಯವನ್ನು ಖಚಿತಪಡಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್, 'ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ' ಎಂದು ತಿಳಿಸಿದ್ದಾರೆ.
'ಘಟನೆಯಲ್ಲಿ ಗಾಯಗೊಂಡವರನ್ನು ಕಲಮಶ್ಯೇರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ನಾಲ್ವರು ವಿದ್ಯಾರ್ಥಿಗಳು ಅದಾಗಾಗಲೇ ಮೃತಪಟ್ಟಿದ್ದರು' ಎಂದು ಮಾಧ್ಯಮಗಳಿಗೆ ತಿಳಿಸಿದರು.
ಘಟನೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಶನಿವಾರ ಜರುಗಿದ ತಂತ್ರಜ್ಞಾನ ಸಮಾವೇಶದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ತೆರೆದ ಸಭಾಂಗಣದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿದ್ದರು. ಮಳೆ ಬಂದ ಕಾರಣ ವಿದ್ಯಾರ್ಥಗಳು ಸುರಕ್ಷಿತ ಜಾಗದತ್ತ ನುಗ್ಗಿದರು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.