ಮುಂಬೈ: ದಕ್ಷಿಣ ಮುಂಬೈನ ಬೆಂಡಿ ಬಜಾರ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
0
samarasasudhi
ನವೆಂಬರ್ 26, 2023
ಮುಂಬೈ: ದಕ್ಷಿಣ ಮುಂಬೈನ ಬೆಂಡಿ ಬಜಾರ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಮೌಲಾನಾ ಆಜಾದ್ ರಸ್ತೆಯ ಗೋಲ್ ದೇವಲ್ ದೇವಸ್ಥಾನದ ಜಂಕ್ಷನ್ ಬಳಿ ಮೆರವಣಿಗೆ ವೇಳೆ ಘರ್ಷಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.
'ಕೆಲ ವ್ಯಕ್ತಿಗಳು ಜೋರಾಗಿ ಡಿಜೆ ಹಾಡಿಗೆ ನೃತ್ಯ ಮಾಡುತ್ತಾ, ಘೋಷಣೆಗಳನ್ನು ಕೂಗುತ್ತಿದ್ದರು. ಇದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಈ ವೇಳೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿಯನ್ನು ಹತೋಟಿಗೆ ತರಲು ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಯಿತು' ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.