ನವದೆಹಲಿ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸೇರಿದ ₹538.05 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ತಿಳಿಸಿದೆ.
0
samarasasudhi
ನವೆಂಬರ್ 02, 2023
ನವದೆಹಲಿ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸೇರಿದ ₹538.05 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ತಿಳಿಸಿದೆ.
ಇದರಲ್ಲಿ 17 ವಸತಿ ಫ್ಲ್ಯಾಟ್‌ಗಳು, ಬಂಗಲೆಗಳು ಹಾಗೂ ವಾಣಿಜ್ಯ ಕಟ್ಟಡಗಳು ಸೇರಿವೆ.
ಕೆನರಾ ಬ್ಯಾಂಕ್‌ಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪ ಗೋಯಲ್ ಅವರ ಮೇಲಿದೆ. ಅವರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಸದ್ಯ ಅವರು ಮುಂಬೈನ ಕಾರಾಗೃಹದಲ್ಲಿದ್ದಾರೆ.