HEALTH TIPS

ಛತ್ತೀಸಗಢ, ಮಿಜೋರಾಂ: ದಾಖಲೆಯ ಶೇ. 72ರಷ್ಟು ಮತದಾನ

                     ರಾಯಪುರ: ಛತ್ತೀಸಗಢ ಮತ್ತು ಮಿಜೋರಾಂ ವಿಧಾನಸಭೆಗೆ ಮಂಗಳವಾರ ಮತದಾನ ನಡೆದಿದ್ದು ಉಭಯ ರಾಜ್ಯಗಳಲ್ಲಿ 5 ಗಂಟೆ ವೇಳೆಗೆ ಶೇ.72 ರಷ್ಟು ಮತದಾನ ನಡೆದಿದೆ.

                ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಚುನಾವಣೆ ನಡೆಯಿತು. 5 ಗಂಟೆ ಸುಮಾರಿಗೆ ಶೇ.   69 ರಷ್ಟು ಮತದಾನ ನಡೆದಿದೆ ಎಂದು ಚುನಾವಣೆ ಅಧಿಕಾರಿಗಳು ಹೇಳಿದ್ದಾರೆ.


                 ಮತದಾನಕ್ಕೆ 5,304 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಸಣ್ಣ ಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಚುನಾವಣೆ ಶಾಂತಿಯುತವಾಗಿ ನಡೆಯಿತು. ನಕ್ಸಲ್‌ ಪ್ರದೇಶಗಳಲ್ಲಿ ಮತದಾನ ನಡೆದಿದ್ದರಿಂದ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

            ಮಿಜೋರಾಂ ವಿಧಾನಸಭೆಯ 40 ಸ್ಥಾನಗಳಿಗೆ ಚುನಾವಣೆ ನಡೆಯಿತು. ಸಂಜೆ 5 ಗಂಟೆ ಸುಮಾರಿಗೆ ಶೇ.73 ರಷ್ಟು ಮತದಾನ ನಡೆದಿದೆ ಎಂದು ಚುನಾವಣೆ ಅಧಿಕಾರಿಗಳು ಹೇಳಿದ್ದಾರೆ.

               ಮತದಾನಕ್ಕೆ 1,276 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಸಣ್ಣ ಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಚುನಾವಣೆ ಶಾಂತಿಯುತವಾಗಿ ನಡೆಯಿತು. ಆಡಳಿತಾರೂಢ ಮಿಜೊ ನ್ಯಾಷನಲ್‌ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷ ಝೆಡ್‌ಪಿಎಂ 40 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿ ಮತ್ತು ಎಎಪಿ ಕ್ರಮವಾಗಿ 23 ಮತ್ತು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.

ಮತದಾನಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries